ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್ ಥಿಯೇಟರ್ಗೆ ಒಂದೇ ರೀತಿಯ ದರ ನಿಗದಿ ಮಾಡುವ ಬಗ್ಗೆ ಸರ್ಕಾರ ಆಲೋಚನೆ ಮಾಡಿದೆ. ಪರಿಷತ್ ಕಲಾಪದಲ್ಲಿ ಈ ಬಗ್ಗೆ ಚರ್ಚೆ ಆಗಿದ್ದು, ಸರ್ಕಾರದ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.
ಪರಿಷತ್ ಕಲಾಪದಲ್ಲಿ ಎಂಎಲ್ಸಿ ಗೋವಿಂದ ರಾಜು ಏಕ ರೂಪದ ದರ ವಿಚಾರವನ್ನು ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದ್ದಾರೆ. ‘ಚಿತ್ರ ಮಂದಿರಗಳಲ್ಲಿ ಒಂದೊಂದು ಸಿನಿಮಾಗೆ ಒಂದೊಂದು ದರ ನಿಗದಿ ಮಾಡಲಾಗುತ್ತಿದೆ. ಕನ್ನಡ ಸಿನಿಮಾಗೆ ಒಂದು ದರ, ಅನ್ಯಭಾಷೆ ಸಿನಿಮಾಗೆ ಇನ್ನೊಂದು ದರ ನಿಗದಿ ಮಾಡಲಾಗುತ್ತಿದೆ. ಸರ್ಕಾರದ ಪರಿಮಿತಿಯಲ್ಲೇ ದರ ನಿಯಂತ್ರಣ ಇದ್ದರೂ ನಿಯಂತ್ರಣ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.