Sunday, October 12, 2025

ಸರ್ವೆಗಾಗಿ ದಸರಾ ರಜೆ ವಿಸ್ತರಣೆ: ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಧನ್ಯವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಾತಿ ಸಮೀಕ್ಷೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಧನ್ಯವಾದ ಸಲ್ಲಿದೆ.

ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಸಂಘದ ಕೋರಿಕೆಯನ್ನು ಪರಿಗಣಿಸಿ ದಸರಾ ರಜಾವಧಿಯನ್ನು ಸಮೀಕ್ಷಾ ಕಾರ್ಯವನ್ನು ಒಳಗೊಂಡಂತೆ ವಿಸ್ತರಣೆ ಮಾಡಿದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ಸಂಘವು ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಸಹಕಾರದಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ರಮ ನಡೆಯುತ್ತಿದೆ. ಈ ಸಮೀಕ್ಷಾ ಕಾರ್ಯದಲ್ಲಿ ಬಹಳಷ್ಟು ಜನ ಶಿಕ್ಷಕರನ್ನ ಸರ್ಕಾರ ನೇಮಕಗೊಳಿಸಿದ್ದು, ಹಲವಾರು ಕಾರಣಗಳಿಗಾಗಿ ಸಮೀಕ್ಷಾ ಕಾರ್ಯ ನಿರ್ದಿಷ್ಟ ಗುರಿಯನ್ನು ಸಾಧಿಸಿರುವುದಿಲ್ಲ. ಅಲ್ಲದೆ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಾಲೆಗಳನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಸಿ ತದನಂತರ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ನೆನ್ನೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿತ್ತು.

error: Content is protected !!