ಇಂದಿನಿಂದ ಸೆ. 30ರ ವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಈ ಕೆಲಸದ ಅವಧಿಯು ಸೆ.30ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!