ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸೂಚನೆ ನೀಡಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಡವರು ಮತ್ತು ಹಸಿದವರ ಪಾಲಿಗೆ ಅನ್ನಕೇಂದ್ರವಾಗಿದ್ದ ಇಂದಿರಾ ಕ್ಯಾಂಟೀನ್ ಅನ್ನು ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈಗ ಇರುವ ಕ್ಯಾಂಟೀನ್‌ ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಮಾಡಲಾಗಿತ್ತು. ಇದೀಗ 243 ಸ್ಥಳಗಳಲ್ಲೂ ಕ್ಯಾಂಟೀನ್ ಆರಂಭಿಸುತ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್​ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ ಎಂದು ತಿಳಿಸಿದರು.

ಇಂದಿರಾ ಕ್ಯಾಂಟಿನ್ ಉಪಾಹಾರ ಬೆಲೆ 5 ರಿಂದ 10 ರೂಪಾಯಿಗೆ ಏರಿಕೆ ಮಾಡಲಾಗುತ್ತದೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ, ಅದು ಹಾಗೆಯೇ ಮುಂದುವರಿದಿದೆ. ಜೊತೆಗೆ ಇನ್ನು ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ. ನಾವು ಮಾರ್ಷಲ್ಸ್‌ ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ‌ ಟೆಂಡರ್, ಗುತ್ತಿಗೆದಾರರಿಗೆ ಹಳೇ ಪೇಮೆಂಟ್ ಮಾಡಲಾಗುವುದು ಎಂದು ಜಯರಾಂ ರಾಯ್‌ಪುರ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!