ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ನೀಡುತ್ತದೆ. ಆದರೆ ಕೇಂದ್ರ ಸರಕಾರ ಯಾವುದೇ ಸಮಂಜಸ ಅನುದಾನ ನೀಡುತ್ತಿಲ್ಲ. ಶೀಘ್ರವೇ ಕೇಂದ್ರದಿಂದ ಅನುದಾನ ಪಡೆದು ಸಂಪನ್ಮೂಲ ಹೆಚ್ಚಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳ ಬಗ್ಗೆ ಶಾಸಕ ಗವಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು, ಗ್ಯಾರಂಟಿಗಳ ಬಗ್ಗೆ ಪಕ್ಷ, ಸರ್ಕಾರ ತೀರ್ಮಾನ ಕೈಗೊಂಡಿದೆ. ಗ್ಯಾರಂಟಿ ಜಾರಿಗೆ ತರೋದಕ್ಕೆ ಕದ್ದು ಮುಚ್ಚಿ ತೀರ್ಮಾನ ಮಾಡಿಲ್ಲ. ಗ್ಯಾರಂಟಿಗಳನ್ನು ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ, ತಪ್ಪಿಲ್ಲ, ನಾನೂ ಕೇಳ್ತೀನಿ. ಸರ್ಕಾರ ಅನುದಾನ ಕೊಡ್ತಿದೆ. ಕೇಂದ್ರವೂ ಸರಿಯಾದ ಅನುದಾನ ಕೊಡ್ತಿಲ್ಲ. ಕೇಂದ್ರದ ಅನುದಾನ ತಂದು, ನಮ್ಮ ಸಪನ್ಮೂಲವೂ ಹೆಚ್ಚಿಸಿಕೊಳ್ತೇವೆ ಎಂದು ಭರವಸೆ ನೀಡಿದರು.