March 23, 2026
Monday, March 23, 2026
spot_img

ರಾಜ್ಯ ಸರ್ಕಾರ ಜನತೆಗೆ ಸಿಹಿಸುದ್ದಿ: ಎಲ್ಲಾ ಜಿಲ್ಲೆಗಳಲ್ಲಿಯೂ `ಆಶಾ ಕಿರಣ’ ಯೋಜನೆ ಅನುಷ್ಠಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ `ಆಶಾ ಕಿರಣ’ ಯೋಜನೆ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ವೇಳೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !