ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21ನ್ನು ‘ದಾಸೋಹ ದಿನ’ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈಕುರಿತು ದಾಸೋಹ ದಿನದ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈ ದಾಸೊಹ ದಿನದ ಘೋಷಣೆ ಮಾಡಿದ್ದರು. ಇದೀಗ ಈ ದಾಸೋಹ ದಿನದ ಆಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.