Sunday, November 9, 2025

ಕಬ್ಬು ಬೆಳೆಗಾರರ ಕಿವಿಯಲ್ಲಿ ಹೂ ಇಟ್ಟು ರಾಜ್ಯ ಸರ್ಕಾರದಿಂದ ದೋಖಾ: ಎಚ್.ಡಿ.ಕುಮಾರಸ್ವಾಮಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಬ್ಬು ಬೆಳೆಗಾರರಿಗೆ 100 ರು. ಹೆಚ್ಚಳ ಮಾಡಿರುವ ರಾಜ್ಯ ಸರಕಾರದ ನಡೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದು, ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರೈತರನ್ನು ನಂಬಿಸಿ ಸರ್ಕಾರ ಮೋಸ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು, ಮೋದಿಗೆ ಅವರಿಗೆ ‌ಪತ್ರ ಬರೆದು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದರು. ಹಿಂದೆ ಒಮ್ಮೆ ವಿಧಾನಸಭೆಯಲ್ಲಿ ಇದೇ ಸಿಎಂ, ಡಿಸಿಎಂ ಸೇವಂತಿಗೆ ಹೂವನ್ನು ಕಿವಿ ಮೇಲೆ ಇಟ್ಟುಕೊಂಡು ಬಂದಿದ್ದರು. ಇವರು ಇಂದು ಎರಡೂವರೆ ವರ್ಷದಲ್ಲಿ ನಿತ್ಯವೂ ಜನರಿಗೆ ಕಿವಿಗೆ ಹೂ ಮುಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಕಬ್ಬಿಗೆ ಎಫ್ಆರ್‌ಪಿ ದರ ಎಂದು ಕ್ವಿಂಟಲ್ ಗೆ 3,550 ರು. ನಿಗದಿ ಮಾಡಿದ್ದಾರೆ. ಆದರೆ ಶುಕ್ರವಾರದ ದಿನ ‌ಮ್ಯಾರಥಾನ್ ಸಭೆ ಮಾಡಿದ್ದಾರೆ. ಕೇಂದ್ರ ಸರ್ಕಾರ 3550 ರು. ಎಫ್ಆರ್‌ಪಿ ನಿಗದಿ ಮಾಡಿದೆ. ರೈತರು ಕೇಳಿದ್ದು 3500 ರು. ಬೆಲೆಯನ್ನು. ಸರ್ಕಾರ ಮ್ಯಾರಥಾನ್ ‌ಸಭೆ ಮಾಡಿ ಕೊಟ್ಟಿದ್ದು 3,300 ರು.ಮಾತ್ರ. ಹಾಗಾದರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ಧೋಖಾ ಮಾಡಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

error: Content is protected !!