ಹೊಸದಿಗಂತ ವರದಿ ಹುಬ್ಬಳ್ಳಿ:
ಧಾರವಾಡ-ಬೆಳಗಾವಿ ಮಧ್ಯೆ ರೈಲ್ವೆ ಮಾರ್ಗದ ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರ ಭೂಸ್ವಾಧೀನಕ್ಕೆ ಸಹಕಾರ ನೀಡುತ್ತಿಲ್ಲ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಟೈ ಹುಬ್ಬಳ್ಳಿ ಪದಾಧಿಕಾರಿಗಳು ಸರ್ಕಾರ ಮೇಲೆ ಒತ್ತಡ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ನಗರದಲ್ಲಿ ಶನಿವಾರ ಟೈ ಹುಬ್ಬಳ್ಳಿ ವತಿಯಿಂದ ಏರ್ಪಡಿಸಿದ್ದ ಟೈಕಾನ್-2026 ಉತ್ತರ ಕರ್ನಾಟಕ ರೈಸಿಂಗ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಎ-ಎಂಸಿಜಿ ಕ್ಲಸ್ಟರ್‌ಗೆ ಸ್ಥಾಪನೆಯಾಗಿದ್ದು, ರಾಜ್ಯ ಸರ್ಕಾರ ಭೂಮಿ ದರ ಹೆಚ್ಚಿಸಿದೆ. ಇದರಿಂದ ಕೈಗಾರಿಕೋದ್ಯಮಿಗಳು ಮುಂದೆ ಬರುತ್ತಿಲ್ಲ. ಈ ಬಗ್ಗೆ ಸಂಸ್ಥೆಗಳು ಸರ್ಕಾರದ ಗಮನಕ್ಕೆ ತರಬೇಕು ಎಂದರು.
ಇದನ್ನೂ ಓದಿ:
ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗದ ಕಾಮಗಾರಿಗೆ ಶೀಘ್ರದಲ್ಲಿಯೇ ಅನುಮೋದನೆ ದೊರೆಯಲಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಕೈಗಾರಿಕೋದ್ಯಮಿಗಳಿಗೆ ಬಹಳಷ್ಟು ಸಹಕಾರವಾಗಲಿದೆ. ಇದು ಬಂದರುಗಳಿಗೆ ಸಂಪರ್ಕದ ಕೊಂಡಿಯಾಗಲಿದ್ದು, ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ದೇಶದಲ್ಲಿ ವಾಣಿಜ್ಯೋದ್ಯಮಿಗಳಿಗೆ ಕೌಶಲ್ಯ ಬಹಳ ಅವಶ್ಯಕ. ದೇಶದ ಎಲ್ಲ ಕ್ಷೇತ್ರದಲ್ಲಿ ಅವಕಾಶಗಳು ತೆರೆದು ಕೊಂಡಿವೆ. ಕೃತಕ್ ಬುದ್ಧಿ ಮತ್ತೆ(ಎಐ), ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರ ಬೆಳೆದಿವೆ. ದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಕೋಟ್ಯಾಂತರ ಉದ್ಯೋಗ ಸೃಷ್ಟಿಯಾಗಲಿವೆ. ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ತಿಳಿಸಿದರು.



