Sunday, October 26, 2025

ಕರ್ನೂಲ್​ ಬಸ್​ ದುರಂತದಿಂದ ರಾಜ್ಯ ಸರ್ಕಾರ ಅಲರ್ಟ್: ಇನ್ಮುಂದೆ KSRTC ಬಸ್ ಗಳಲ್ಲಿ ಈ ವಸ್ತುಗಳಿಗೆ ನೋ ಎಂಟ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರ ಪ್ರದೇಶದ ಕರ್ನೂಲ್​ ಸಮೀಪ ಅಗ್ನಿ ದುರಂತದಿಂದ ಖಾಸಗಿ ಬಸ್ ಸುಟ್ಟು ಕರಕಲಾಗಿ ಹಲವರು ಸಾವನ್ನಪ್ಪಿರುವ ಬೆನ್ನಲ್ಲೇ, ಕರ್ನಾಟಕ ಸರ್ಕಾರ ಸಾರಿಗೆ ಬಸ್​ಗಳಲ್ಲಿನ ಸುರಕ್ಷತಾ ಕ್ರಮದ ಪರಿಶೀಲನೆಗೆ ಮುಂದಾಗಿದ್ದು, ಈ ಬಗ್ಗೆ ನಾಲ್ಕೂ ನಿಗಮಗಳ ಎಂಡಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ. ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲಿಸುವಂತೆ ಸೂಚಿಸಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಮುಖ್ಯಸ್ಥರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರದ ಮೂಲಕ ಒಂದಿಷ್ಟು ಸಲಹೆ, ಸೂಚನೆ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ ಎಂದು ಸಚಿವರು ತಿಳಿಸಿದ್ದು, ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ‌ ನಷ್ಟ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ‌ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ ಎಂದು ತಿಳಿಸಿದ್ದಾರೆ.

ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು ಅಥವಾ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಶಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು.

ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು.

ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು.

ಬಸ್ಸುಗಳ ನವೀಕರಣ‌ದ ಬಗ್ಗೆ ಪರಿಶೀಲನೆ ನಡೆಸಬೇಕು.

ಈ‌ ಮೇಲಿನ ಯಾವುದೇ ನೂನ್ಯತೆ ಕಂಡು ಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು.

error: Content is protected !!