Sunday, December 3, 2023

Latest Posts

ಪಠ್ಯಕ್ರಮ ಪರಿಷ್ಕರಣೆಗೆ ರಾಜ್ಯ ಸರಕಾರ ಆದೇಶ: ಡಾ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ಕಾಂಗ್ರೆಸ್ ಸರ್ಕಾರ ಪಠ್ಯಕ್ರಮ ಪರಿಷ್ಕರಣೆಗೆ ಆದೇಶ ಹೊರಡಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿದ್ದ ಮತ್ತು 2023-24ನೇ ಸಾಲಿನಲ್ಲಿ ಮಕ್ಕಳು ವ್ಯಾಸಂಗ ಮಾಡುತ್ತಿರುವ ಪಠ್ಯವನ್ನು ಪರಿಷ್ಕರಣೆ ಮಾಡಲಾಗುತ್ತಿದೆ.

ಪಠ್ಯ ಪರಿಷ್ಕರಣೆಗೆ ವಿವಿಧ 5 ಸಮಿತಿಗಳನ್ನು ನೇಮಿಸಲಾಗಿದ್ದು, 37 ಮಂದಿಯನ್ನು ಸದಸ್ಯರನ್ನು ನೇಮಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ನಿವೃತ್ತ ಪ್ರಾಧ್ಯಾಪಕ ಡಾ. ಮಂಜುನಾಥ ಜಿ. ಹೆಗಡೆ ಅವರನ್ನು ಸಮಿತಿಯ ಸಂಯೋಜಕರನ್ನಾಗಿ ನೇಮಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಠ್ಯ ಪರಿಷ್ಕರಣೆ ಆದೇಶ ಹೊರಡಿಸಿದ್ದು, 2024-25ನೇ ಸಾಲಿಗೆ ಪಠ್ಯವನ್ನು ಜಾರಿಗೊಳಿಸಲು ಅನುಕೂಲವಾಗುವಂತೆ 2ರಿಂದ 3 ತಿಂಗಳೊಳಗೆ ಪರಿಷ್ಕರಣಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಕಾಲಮಿತಿ ನೀಡಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ 1ರಿಂದ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕಗಳು (ಪ್ರಥಮ ಮತ್ತು ದ್ವಿತೀಯ ತೃತೀಯ ಭಾಷೆ), 9 ಮತ್ತು 10ನೇ ತರಗತಿಯ ತೃತೀಯ ಭಾಷೆ, 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!