ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ-ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ಸರ್ಕಾರ ಇಂದು ಗಾಣಿಗ ಅಭಿವೃದ್ಧಿ ನಿಗಮ ಹಾಗೂ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದೆ.

ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!