ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 40,000 ಹಾಗೂ ಸರ್ಕಾರಿ ಪ್ರೌಢಶಾಲೆಗಳಿಗೆ 11,000 ಶಿಕ್ಷಕರ ನೇಮಕ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.
ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ಅಂತ್ಯದ ವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಣಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.