ರಾಜ್ಯಾದ್ಯಂತ ಬುದ್ಧ ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇನ್ನುಮುಂದೆ ಭಗವಾನ್ ಗೌತಮ ಬುದ್ಧನ ಜಯಂತಿಯನ್ನು ಸರ್ಕಾರದ ವತಿಯಿಂದಲೇ ಆಚರಣೆ ಮಾಡಲು ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನದಲ್ಲಿ ಬುದ್ಧ ಆಚರಣೆಗೆ ಮಾಡಲಾಗುವ ವೆಚ್ಚವನ್ನು ಭರಿಸುವ ಬಗ್ಗೆ ಆದೇಶದಲ್ಲಿ ತಿಳಿಸಲಾಗಿದೆ.

ಮೈಸೂರಿನ ಸಹಕಾರ ಸಂಘಗಳ ಅಪರ ನಿಬಂಧಕರು (ನಿ) 2023ರಲ್ಲಿ ಪತ್ರವನ್ನು ಬರೆದು, ರಾಜ್ಯದಲ್ಲಿ ಮಹಾವೀರ, ವಾಲ್ಮೀಕಿ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತರಲಾಗಿದೆ. ಆದರೆ, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸಲಾಗುತ್ತಿದೆ. ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಗೌತಮ ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ .

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!