ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸರ್ಕಾರದ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಾಲಿ ಇರುವ ಜನ ಔಷಧ ಕೇಂದ್ರಗಳ ಒಪ್ಪಂದ ಸ್ಥಗಿತಗೊಳಿಸುವಂತೆ ಸರ್ಕಾರ, ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.ಜೊತೆಗೆ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿಗಳನ್ನು ನೀಡುವುದು ಸರ್ಕಾರ ನಿಷೇಧಿಸಿದೆ.
ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ.
ಪರಿಶೀಲನೆ ಹಂತದಲ್ಲಿ ಇರುವ 31 ಜನ ಔಷಧ ಕೇಂದ್ರಗಳ ಅರ್ಜಿಗಳಿಗೆ ಅನುಮತಿ ನೀಡದಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆ ನೀಡಿದೆ. ಅಲ್ಲದೇ, ಜನ ಔಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಯನ್ನು ಸಮಗ್ರವಾಗಿ ಪರಿಶೀಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯ ಸರ್ಕಾರದ ಅಧಿಸೂಚನೆ ಪ್ರಕಾರ, ಸರ್ಕಾರಿ ಆಸ್ಪತ್ರೆಗಳ ಆವರಣದಿಂದ ಹೊರಗೆ ಇರುವ ಜನ ಔಷಧಿಕ ಕೇಂದ್ರಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ಜನ ಔಷಧಿ ಕೇಂದ್ರಗಳು ಮುಂದುವರೆಯುತ್ತವೆ.