ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳನ್ನ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐದು ನಗರ ಪಾಲಿಕೆಗಳ ಗಡಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಆಗಸ್ಟ್ 1 ರಿಂದ ಆರಂಭ ಆಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್ ಪಾಸ್ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ.
5 ನಗರ ಪಾಲಿಕೆಗಳ ಹೆಸರು ಹೀಗಿವೆ;
ಬೆಂಗಳೂರು ಪಶ್ಚಿಮ ನಗರ ಪಾಲಿಕೆ
ಬೆಂಗಳೂರು ದಕ್ಷಿಣ ನಗರ ಪಾಲಿಕೆ
ಬೆಂಗಳೂರು ಉತ್ತರ ನಗರ ಪಾಲಿಕೆ
ಬೆಂಗಳೂರು ಪೂರ್ವ ನಗರ ಪಾಲಿಕೆ
ಬೆಂಗಳೂರು ಕೇಂದ್ರ ನಗರ ಪಾಲಿಕೆ