BIG NEWS | ಲಿಕ್ವಿಡ್ ನೈಟ್ರೋಜನ್ ನಿಷೇಧಿಸಿ ರಾಜ್ಯ ಸರ್ಕಾರದ ಆದೇಶ, ಅದಾಗ್ಯೂ ಬಳಕೆ ಮಾಡಿದ್ರೆ 10 ಲಕ್ಷ ದಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅದಾಗ್ಯೂ ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್  ಬಳಸುವುದನ್ನು ನಿರ್ಬಂಧಿಸಲಾಗಿದೆ.

ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿತ್ತು.

ಜೊತೆಗೆ ಎಲ್ಲಾ ಹೋಟೆಲ್ ಹಾಗೂ ಪಾನ್ ಬೀಡಾ ಅಂಗಡಿಗಳಿಗೂ ಹೋಟೆಲ್ ಅಸೋಸಿಯೇಷನ್ ಆದೇಶ ನೀಡಿದೆ. ಈ ಆದೇಶ ಮೀರಿಯೂ ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೋಟೆಲ್​ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!