ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ನೇಕಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.

ಕಳೆದ ವಾರ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿತ್ತು. ಇದೀಗ ನೇಕಾರ ಅಭಿವೃದ್ಧಿ ನಿಗಮ ರಚನೆ ಕುರಿತು ಕರ್ನಾಟಕ ಸರ್ಕಾರ ಆದೇಶ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟ್ ಮಾಡಿದ್ದು, ರಾಜ್ಯದ ನೇಕಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಲಾಗಿದ್ದು, ಈ ನಿಗಮವು ನೇಕಾರ, ತೊಗಟವೀರ, ಪದ್ಮಸಾಲಿ, ಕುರುಹಿನಶೆಟ್ಟಿ ಸೇರಿದಂತೆ ಇತರ ನೇಕಾರ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!