ರಾಜ್ಯ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಪಡಿತರ ವ್ಯವಸ್ಥೆಗೆ ಬಳಸಿಕೊಳ್ಳಲು ರಾಗಿ ಖರೀದಿಯನ್ನು ಹೆಚ್ಚಿಸಬೇಕು ಎಂಬುದು ಈ ಹಿಂದಿನ ಸದನದಲ್ಲಿ ಅನೇಕ ಸದಸ್ಯರಿಂದ ಬಂದಿದ್ದ ಬೇಡಿಕೆಯಾಗಿತ್ತು. ಇದಕ್ಕೆ ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪೂರಕ ಸ್ಪಂದನೆಯೂ ಸಿಕ್ಕಿತ್ತು.
ಗುರುವಾರ ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಗಿ ಖರೀದಿಗೆ ಶುಕ್ರವಾರದಿಂದ ನೋಂದಣಿ ಪ್ರಾರಂಭಿಸುವ ಘೋಷಣೆ ಮಾಡಿದ್ದಾರೆ. ಪ್ರಮುಖ ರಾಗಿ ಬೆಳೆಯುವ ಪ್ರದೇಶಗಳಲ್ಲಿ ನೋಂದಣಿ ಆರಂಭವಾಗಲಿದ್ದು ನಂತರ ಖರೀದಿ ಪ್ರಕ್ರಿಯೆಯೂ ನಡೆಯಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸುಮಾರು 2 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿ ಆಗಲಿದೆ, ಅಂತೆಯೇ ಆಯವ್ಯಯದಲ್ಲಿರುವ ಇನ್ನೂ ಹಲವು ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ನಿರ್ದೇಶನ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!