ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಲು ʼNOʼ ಎಂದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್ :

1961ರ ಕರ್ನಾಟಕ ಅಂಗಡಿ ಮತ್ತು ಸ್ಥಾಪನೆ ಕಾಯ್ದೆಗೆ ತಿದ್ದುಪಡಿ ತರುವ ಹಾಗೂ ಕಾರ್ಮಿಕರ ಕೆಲಸದ ಅವಧಿಯನ್ನ 9 ಗಂಟೆಯಿಂದ 10 ಗಂಟೆಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ಮುಂದಾಗಿದೆ.

ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಕೇಂದ್ರ ಕಾರ್ಮಿಕ ಇಲಾಖೆಯಪ್ರಸ್ತಾವನೆಯನ್ನ ರಾಜ್ಯ ಸರ್ಕಾರ ತಿರಸ್ಕಾರ ಮಾಡಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಿನದಲ್ಲಿ 10 ಗಂಟೆ ಕೆಲಸಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡದ ಹಿನ್ನೆಲೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಪ್ರಸ್ತಾವನೆ ತಿರಸ್ಕಾರ ಮಾಡುವ ಸಾಧ್ಯತೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!