ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭೀಕರ ಬರ ಆವರಿಸಿದ್ದು, ಜನರನ್ನು ಕಿತ್ತು ತಿನ್ನುತ್ತಿದೆ. ಸಾಲ ಮನ್ನಾ ಮಾಡಿ ರೈತರನ್ನು ಬೆಂಬಲಿಸಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಕೆರೆ ಬತ್ತಿ ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರನ್ನು ಬೆಂಬಲಿಸಬೇಕು ಎಂದು ಒತ್ತಾಯಿಸಿದರು.