ಹೊಸದಿಗಂತ ವರದಿ,ಶಿರೂರು
ಶಿರೂರಿನ ಭೂ ಕುಸಿತದಲ್ಲಿ ಮೃತಪಟ್ಟಿದ್ದ ಕೇರಳದ ಅರ್ಜುನ್ ಅವರ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಕೇರಳದ ಕಾಲಿಕಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಿರೂರು ಭೂಕುಸಿತದಲ್ಲಿ ಅರ್ಜುನ್ ಮತ್ತು ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು.
ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.