ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ನ್ಯಾಯಾಲಯವೇ ಹೇಳಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಿರಂತರ ತುಷ್ಟೀಕರಣ ನೀತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟೆಂಡರ್ ನಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕುರಿತು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಸಿದ್ದರಾಮಯ್ಯ ಬಳಿ ನಾನು ಯಾವಗಲೇ ಹೋದರೂ ಮುಸ್ಲಿಂ ಅಭಿವೃದ್ಧಿಗೆ ಹಣ ಕೊಡುತ್ತಾರೆ ಎಂದಿದ್ದಾರೆ.
ಪೊಲೀಸ್ ಠಾಣೆಗೆ ಬೆಂಕಿ ಹಾಕಿದ್ದ ಆರೋಪಿಗಳನ್ನು ಖುಲಾಸೆ ಮಾಡಿದರು, ದೇವಸ್ಥಾನಕ್ಕೆ ಮಠಗಳಿಗೆ ನೀಡಿದ ಜಾಗಕ್ಕೆ ವಕ್ಫ್ ನೋಟಿಸ್ ನೀಡುತ್ತಿದೆ. ಎಸ್ಸಿ,ಎಸ್ಟಿ ಸಿಗುತ್ತಿದ್ದ ಮೀಸಲಾತಿಯನ್ನು ತೆಗೆದು ಮುಸ್ಲಿಂ ಸಮುದಾಯಕ್ಕೆ ನೀಡಲು ಸರ್ಕಾರ ಚಿಂತಿಸಿದೆ ಎಂದು ಕಿಡಿಕಾರಿದ್ದಾರೆ.