ಹೊಸದಿಗಂತ ಆನ್ ಲೈನ್ ಡೆಸ್ಕ್:
ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ. 2021- 22ನೇ ಸಾಲಿಗೂ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. .