ರಾಜ್ಯ ಸರ್ಕಾರದ ತುಘಲಕ್ ದರ್ಬಾರ್: ಟ್ವಿಟ್ಟರ್‌ ಖಾತೆ ಡಿಪಿ ಬ್ಲ್ಯಾಕ್‌ ಮಾಡಿ ಬಿಜೆಪಿ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿದ ಆದೇಶ ವಿರುದ್ಧ ಆಕ್ರೋಶ ಭುಗಿಲೆದಿದ್ದು, ಬಿಜೆಪಿ ನಾಯಕರು ಟ್ವಿಟರ್‌ ಖಾತೆಯನ್ನು ಬ್ಲ್ಯಾಕ್ ಮಾಡಿ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ಬಿಜೆಪಿಯ 10 ಶಾಸಕರನ್ನು ಅಧಿವೇಶನದಿಂದ ಅಮಾನತು ಮಾಡಿದ್ದಾರೆ.

ಬಿಜೆಪಿ ಶಾಸಕರನ್ನು ಹೊರಗೆ ಹಾಕಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸ್ಪೀಕರ್‌ ಕಚೇರಿ ಬಳಿ ಪ್ರತಿಭಟನೆ ಮಾಡಲು ಮುಂದಾಗುತ್ತಾರೆ. ವಿಧಾನಸಭಾ ಆವರಣದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿದ್ದ ‘ಗೃಹಲಕ್ಷ್ಮಿ’ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೋಲೀಸರಿಂದ ಪ್ರತಿಭಟನಾ ನಿರತ ಶಾಸಕರನ್ನು ವಶಕ್ಕೆ ಪಡೆಯಲಾಯಿತು. ಇದರ ಬೆನ್ನಲ್ಲೇ ಬಿಜೆಪಿಯು ಟ್ವಿಟರ್‌ ಖಾತೆಯನ್ನು ಬ್ಲ್ಯಾಕ್‌ (ಕಪ್ಪು) ಮಾಡಿ ವಿನೂತನವಾಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭಟನೆ ಮಾಡಲು ಮುಂದಾಗಿದೆ.

ರಾಜ್ಯದಲ್ಲಿ ಸರ್ವಾಧಿಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ತುಘಲಕ್ ದರ್ಬಾರ್ ಮಿತಿ ಮೀರಿದೆ. ಇವರು ಮಾಡುವ ಅನಾಚರಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನೀವು ನಮ್ಮ ಶಾಸಕರನ್ನು ಅಮಾನತು ಮಾಡಬಹುದು, ಹತ್ತಿಕ್ಕಲು ಸಾಧ್ಯವಿಲ್ಲ. ನಿಮ್ಮ ಈ ರಣಹೇಡಿ ದಬ್ಬಾಳಿಕೆಗೆ ನಾವು ಕುಗ್ಗುವುದಿಲ್ಲ. ನಿಮ್ಮ ಜನ ವಿರೋಧಿ, ನಾಡ ವಿರೋಧಿ ನಿಲುವುಗಳ ವಿರುದ್ಧ ನಮ್ಮ ಹೋರಾಟ ಶತ ಸಿದ್ಧ” ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವಿಟ್ಟರ್‌ ಖಾತೆ ಡಿಪಿಯನ್ನು ಬ್ಲ್ಯಾಕ್‌ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!