ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆ ಮಾಡಿದ್ದ ಕೆಲ ಪಠ್ಯ ಕೈ ಬಿಟ್ಟಿದ್ದ ಕಾಂಗ್ರೆಸ್ ಸರ್ಕಾರ ಈಗ ಮುಂದಿನ ವರ್ಷದಿಂದ ಹೊಸ ಪಠ್ಯಪುಸ್ತಕ ರಚನೆ ಮಾಡಲು ಸಮಿತಿ ರಚನೆ ಮಾಡಿದೆ.
ಬಿಜೆಪಿ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಪರಿಷ್ಕರಣೆ ರದ್ದು ಮಾಡಿದ್ದ ಸರ್ಕಾರ, ಈಗ ಇಡೀ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ನೇಮಕ ಮಾಡಿ ಆದೇಶ ಹೊರಡಿಸಿದೆ.