Monday, September 25, 2023

Latest Posts

ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಗೆ ಆಹ್ವಾನ ಕೊಟ್ಟ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗಾಗಿ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಹ್ವಾನಿಸಿದ್ದಾರೆ.

ಆರೋಗ್ಯ ಇಲಾಖೆಯ ವತಿಯಿಂದ ಅಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.

ವರನಟ ಡಾ.ರಾಜಕುಮಾರ್ ಅವರಂತೆ ಪುನೀತ್ ರಾಜಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿದ್ದರು. ಪುನೀತ್ ರಾಜಕುಮಾರ್ ಅವರು ಕಣ್ಣುಗಳ ದಾನ ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಅನೇಕರು ದಿ.ಪುನೀತ್ ರಾಜಕುಮಾರ್ ಅವರನ್ನೇ ಮಾದರಿಯನ್ನಾಗಿಟ್ಟುಕೊಂಡು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ.

ಒಬ್ಬ ದಾನಿ ತನ್ನ ಸಾವಿನ ಬಳಿಕವೂ 8 ಜನರಿಗೆ ಜೀವದಾನ ಮಾಡಬಹುದಾಗಿದೆ. ಅಲ್ಲದೇ ಅಂಗಾಂಶ ದಾನದ ಮೂಲಕ 50 ಜನರ ಜೀವವನ್ನ ಉಳಿಸಬಹುದಾಗಿದೆ. ಜೀವನದ ಸಾರ್ಥಕತೆ ಕಾಣಬಹುದಾದ ಅಂಗಾಂಗ ದಾನಕ್ಕೆ ಸರ್ಕಾರದಿಂದ ಹೆಚ್ಚು ಪ್ರೋತ್ಸಾಹ ನೀಡುವತ್ತ ಕಾರ್ಯಕ್ರಮಗಳನ್ನ ರೂಪಿಸಲು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.

ಅಗಸ್ಟ್ 03 ರಂದು ಅಂಗಾಂಗ ದಾನ ದಿನಾಚರಣೆಗೆ ಆಚರಿಸುತ್ತಿರುವ ರಾಜ್ಯ ಆರೋಗ್ಯ ಇಲಾಖೆ, ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!