ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರ ವಿಷಯದಲ್ಲಿ ರಾಜ್ಯ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಏನು ಮಾಡಬೇಕು? ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ರೈತರಿಗೆ ಧ್ವನಿ ನೀಡುತ್ತೇವೆ. ನಾವು ಬೆಂಬಲಿಸುತ್ತೇವೆ ಎಂದು ಹೇಳಿದರೆ ಬಿಜೆಪಿಯವರು ರಾಜಕೀಯ ಆಟವಾಡುತ್ತಿದ್ದಾರೆ ಎಂದು ಆರೋಪಿಸುತ್ತಾರೆ ಎಂದು ಟೀಕಿಸಿದರು.
ಅಲ್ಪಸಂಖ್ಯಾತರನ್ನು ಉತ್ತೇಜಿಸಲು, ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಕಾಂಗ್ರೆಸ್ ಪಕ್ಷವು ಹಿಂದಿನಿಂದಲೂ ಮಾಡುತ್ತಾ ಬರುತ್ತಿದೆ. ಅದೇ ರೀತಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಇಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಕಿಡಿಕಾರಿದ್ದಾರೆ.