ಭಯೋತ್ಪಾದನೆ, ಕೊಲೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಲಘುವಾಗಿ ತೆಗೆದುಕೊಳ್ಳುತ್ತಿದೆ: ಮಾಳವಿಕ ಅವಿನಾಶ್

ಹೊಸದಿಗಂತ ವರದಿ, ಮೈಸೂರು:

ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಕೃತ್ಯಗಳನ್ನು, ಕೊಲೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆರೋಪಿಸಿ, ಕಿಡಿಕಾರಿದರು.

ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟವನ್ನು ರಾಜ್ಯ ಸರ್ಕಾರ ಬಹಳ ಲಘುವಾಗಿ ತೆಗೆದುಕೊಂಡಿತ್ತು. ಎನ್‌ಐಎ ತನಿಖೆ ನಡೆಸಿ, ಆರೋಪಿಗಳನ್ನು ಕೊಲ್ಕತ್ತಾದಲ್ಲಿ ಬಂದಿದೆ. ಆರೋಪಿಗಳು ತಮಿಳುನಾಡಿನಲ್ಲಿ ಅವಿತುಕೊಂಡಿದ್ದರು. ಇದನ್ನೆಲ್ಲಾ ನೋಡಿದರೆ ಇಂಡಿಯಾ ಒಕ್ಕೂಟದ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ತಮಗೆ ಆಶ್ರಯ ಸಿಗಬಹುದೆಂದು ಭಯೋತ್ಪಾದಕರು ಭಾವಿಸಿದಂತಿದೆ. ರಾಜ್ಯ ಸರ್ಕಾರ ಒಂದು ಜನಾಂಗದವರನ್ನು ಓಲೈಸುವ ತುಷ್ಠೀಕರಣ ಮಾಡುತ್ತಿರುವುದರಿಂದ ಕೊಲೆಗಳು ನಡೆಯುತ್ತಿವೆ. ಜನರಿಗೆ ರಕ್ಷಣೆ ಇಲ್ಲದಂತಾಗಿದೆ, ಜನರ ರಕ್ಷಣೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು.

ಏಪ್ರಿಲ್ ೨೬ ರಂದು ನಡೆಯಲಿರುವ ಚುನಾವಣೆಗೆ ನಾವು ಸಿದ್ದರಿದ್ದೇವೆ. ಜನರ ಮನಸ್ಸಿನಲ್ಲಿ ಮೋದಿಯವರು ಮನೆ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಸಾಧನೆ ಮುಂದಿಟ್ಟುಕೊo ಡು ನಾವು ಚುನಾವಣೆ ಎದುರಿಸುತ್ತೇವೆ. ಕಳೆದ ಹತ್ತು ವರ್ಷದ ಹಿಂದೆ ದೇಶದ ಆರ್ಥಿಕತೆ ಉತ್ತಮವಾಗಿರಲಿಲ್ಲ. ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕತೆ ತುಂಬಾ ಚೆನ್ನಾಗಿದೆ. ವಿಶ್ವದಲ್ಲಿ ಈಗ ೫ ನೇ ಸ್ಥಾನಕ್ಕೆ ಬಂದಿದೆ. ಬರಲಿರುವ ದಿನಗಳಲ್ಲಿ ೩ ನೇ ಸ್ಥಾನಕ್ಕೆ ಬರಲಿದೆ. ಮಹಿಳೆಯರನ್ನ ಶಸಕ್ತರನ್ನಾಗಿ ಮಾಡೋದು ಮೋದಿಯವರ ಗುರಿಯಾಗಿತ್ತು. ಈಗ ನಾವು ಮಹಿಳೆಯರ ಅಭಿವೃದ್ಧಿಯತ್ತ ಸಾಗಿದ್ದೇವೆ. ೨೦೪೭ಕ್ಕೆ ಭಾರತಕ್ಕೆ ಸ್ವತಂತ್ರ ಬಂದು ನೂರು ವರ್ಷ ತುಂಬಲಿದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಮಾಡಲು ಸಂಸತ್ ನಲ್ಲಿ ೩೭೦ ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಲಾಗಿದೆ. ರಾಜ್ಯದಲ್ಲಿ ೨೮ ಕ್ಕೆ ೨೮ ಕ್ಷೇತ್ರ ಗೆಲ್ಲುತ್ತೆವೆ ಎಂದರು. ಮಾಂಗಲ್ಯದ ಬಗ್ಗೆ ಮೋದಿ ವಿರುದ್ಧ ಮಾತನಾಡಿರುವ ಪ್ರಿಯಾಂಕಾಗಾoಧಿ ಮೊದಲು ತಮ್ಮ ಕತ್ತಿನಲ್ಲಿ ಮಾಂಗಲ್ಯವನ್ನು ಧರಿಸಿಕೊಳ್ಳಲು. ಅವರು ಧರಿಸಿಕೊಂಡಿದ್ದನ್ನು ನಾನು ಇಲ್ಲಿಯ ತನಕ ನೋಡಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೆಣ್ಣು ಮಕ್ಕಳ ಕೊಲೆ, ಅತ್ಯಾಚಾರಗಳು ಹೆಚ್ಚಾಗಿದೆ. ಒಂದು ಸಮುದಾಯದ ಓಲೈಕೆಗೆ ಸರ್ಕಾರ ಮುಂದಾಗಿದೆ. ನಮ್ಮ ಹೆಣ್ಣು ಮಕ್ಕಳಯನ್ನ ನಾವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಇಂತಹ ಸರ್ಕಾರಕ್ಕೆ ಜನರು ಏ.೨೬ ರಂದು ತಕ್ಕ ಪಾಠ ಕಲಿಸುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ ವಿವಿಧ ಹಿಂದುಳಿದ ವರ್ಗಗಳ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಬಳಸಿಕೊಂಡಿದ್ದಾರೆ. ಆ ಮೂಲಕ ಹಿಂದುಳಿದ ವರ್ಗಗಳಿಗೆ ದ್ರೋಹ ಮಾಡಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ. ಹಳೆ ಡಬ್ಬ, ಖಾಲಿ ಸೀಸ ಎಂಬoತ ಪರಿಸ್ಥಿತಿ ರಾಜ್ಯ ಸರ್ಕಾರಕ್ಕೆ ನಿರ್ಮಾಣವಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ರಾಜ್ಯದಲ್ಲಿಯೂ ಅತಿ ಹೆಚ್ಚು ಸ್ಥಾನವನ್ನ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇoದ್ರ, ನಗರ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಗ್ರಾಮಾಂತರ ವಕ್ತಾರ ದಯಾನಂದ ಪಾಟೀಲ್, ಮಾಧ್ಯಮ ಸಂಚಾಲಕರಾದ ಮಹೇಶ್ ರಾಜೇ ಅರಸ್, ಮಹದೇವಸ್ವಾಮಿ, ಬಿ.ಎಂ.ಸoತೋಷ್ ಕುಮಾರ್, ವಸಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!