ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಗೃಹ ಸಚಿವ ಪರಮೇಶ್ವರ್ ಅವರ ಹೇಳಿಕೆ ಅತ್ಯಂತ ಆಶ್ಚರ್ಯಕರ ಮತ್ತು ಆತಂಕಕಾರಿ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಂಧಿತರು ಭಯೋತ್ಪಾದಕರು ಎಂದು ಈಗಲೇ ಹೇಳಲಾಗದು ಎಂದು ಪರಮೇಶ್ವರ್ ಹೇಳಿದ್ದಾರೆ. ವಿದೇಶಗಳಲ್ಲಿ ಭಯೋತ್ಪಾದಕರ ನಂಟು ಇರುವ ಮಾಹಿತಿ ಪೊಲೀಸರಿಗೆ ಇದ್ದರೂ ಈ ಹೇಳಿಕೆ ನೀಡಿದ್ದು ಆತಂಕಕಾರಿಯಾಗಿದೆ ಎಂದು ಹೇಳಿದರು.
ರಾಜ್ಯ ಸರಕಾರವು ದಾಕ್ಷಿಣ್ಯ ಬಿಟ್ಟು ತಕ್ಷಣ ಉಗ್ರಗಾಮಿಗಳ ಬೇಟೆಯನ್ನು ಮುಂದುವರೆಸಬೇಕು, ಈ ಪ್ರಕರಣದ ಸ್ವತಂತ್ರ ತನಿಖೆಗೆ ಅವಕಾಶ ಕೊಟ್ಟು , ಉಗ್ರರನ್ನು ಮಟ್ಟ ಹಾಕಬೇಕು ಎಂದು ಕೋಟ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.