ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಜೆ ನಡೆಯಲಿರುವ ಸಭೆಗೂ ಮುನ್ನ ಸಿದ್ದರಾಮಯ್ಯ ತಂಡಕ್ಕೆ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ, ಅಧಿಕಾರ ಹಂಚಿಕೆ ಕುರಿತು ಸಚಿವರ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಕ್ಕಿಂತ ಪಕ್ಷ ದೊಡ್ಡದು. ರಾಜಕೀಯ ಪಕ್ಷವಿದ್ದರೆ ಮಾತ್ರ ಸರ್ಕಾರ ರಚನೆ ಸಾಧ್ಯ. ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ.ಶಿವಕುಮಾರ್ ಸಮ್ಮುಖದಲ್ಲಿ ಸಚಿವರ ಹೆಸರು ಹೇಳದೆ ಎಚ್ಚರಿಕೆ ನೀಡಿದರು.