September 28, 2026
Monday, September 28, 2026
spot_img

‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಜ್ಯ ಬಲಿಯಾಗುತ್ತಿದೆ’: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಹಲವು ನಿರ್ಧಾರಗಳು ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.

ವಿಶೇಷವಾಗಿ ಅಲ್ಪಸಂಖ್ಯಾತರ ಓಲೈಕೆ ಹಾಗೂ ಹಿಂದೂ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಗಲಭೆ ಪ್ರಕರಣ ಕೈಬಿಟ್ಟಿದ್ದು ಏಕೆ?

ಆಳಂದ ಗಲಭೆ ಪ್ರಕರಣ ಹಿಂಪಡೆಯಲು ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ವಿಜಯೇಂದ್ರ ಖಂಡಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸರ್ಕಾರವೇ ಮತಬ್ಯಾಂಕ್ ರಾಜಕಾರಣಕ್ಕೆ ಆದ್ಯತೆ ನೀಡುತ್ತಿದೆ ಎಂದು ಅವರು ಆರೋಪಿಸಿದರು. ಈ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದೂ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:

ತೈಲ ಬೆಲೆ ಏರಿಕೆಗೆ ಸಿಎಂ ವಿರುದ್ಧ ಕಿಡಿ

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಜಾಗತಿಕ ಪರಿಸ್ಥಿತಿಯಿಂದ ಕೇಂದ್ರ ಸರ್ಕಾರ ಅನಿವಾರ್ಯವಾಗಿ ನಿರ್ಧಾರ ಕೈಗೊಂಡಿದೆ ಎಂದರು. ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ಕಡಿಮೆ ಮಾಡಿ ಜನರಿಗೆ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.

Must Read