ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..
ಹೊಸದಿಗಂತ ವರದಿ,ಮಂಗಳೂರು:
ಕರ್ನಾಟಕ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ವಿದ್ಯಾರ್ಥಿಗಳು ಅದ್ಭುತ ಸಾಧನೆ ತೋರಿದ್ದಾರೆ.
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿಗಲು 7 ಚಿನ್ನ, 1 ಬೆಳ್ಳಿ ಹಾಗೂ 1 ಕಂಚಿನ ಪದಕ ಜಯಿಸುವುದರೊಂದಿಗೆ ಕೀರ್ತಿ ತಂದಿದ್ದಾರೆ.
ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿದ್ದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ನ ವಿದ್ಯಾರ್ಥಿಗಳಾದ ಪ್ರಜ್ಞಾ, ಹೈಮಾನ್, ಕಾರ್ತಿಕ್, ರಾಜೇಶ್ ಹಾಗೂ ಜೇನಿಶ್ ಪದಕದೊಂದಿಗೆ 3ನೇ ಸಮಗ್ರ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.
ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ವಿದ್ಯಾರ್ಥಿಗಳು ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿಧಿಸಲಿದ್ದಾರೆ. ಪದಕದ ಸಾಧನೆ ತೋರಿದ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕ ನಿತಿನ್ ಎನ್.ಸುವರ್ಣ, ಶಿಕ್ಷಕ ಸಂಪತ್ ಕುಮಾರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.