ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಹೊಸದಿಗಂತ ವರದಿ ಶಿವಮೊಗ್ಗ:

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು 2023ರ ಜನವರಿ 7, 8 ಮತ್ತು 9ರಂದು ನಗರದ ಕುವೆಂಪು ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಭಾ ಕಾರಂಜಿಯ ಲಾಂಛನ ಹಾಗೂ ಜಾಲತಾಣ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಲಾದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1375ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ರೀತಿಯ 23 ವೈಯಕ್ತಿಕ ವಿಭಾಗಗಳಲ್ಲಿ ಹಾಗೂ 03 ಸಾಮೂಹಿಕ ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ಎಂದ ಅವರು ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮವು ಜನವರಿ 07ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.

1300 ಸ್ಪರ್ಧಿಗಳು ಆಗಮಿಸಲಿದ್ದಾರೆ. 150ಕ್ಕೂ ಹೆಚ್ಚಿನ ತೀರ್ಪುಗಾರರನ್ನು ನಿಯೋಜಿಸಲಾಗಿದೆ ಅದರ ಯಶಸ್ಸಿಗಾಗಿ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ 19 ಸಮಿತಿಗಳನ್ನು ರಚಿಸಲಾಗಿದ್ದು, ಅದರ ಮೇಲ್ವಿಚಾರಣೆಗಾಗಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!