ಅಧ್ಯಕ್ಷೀಯ ಚುನಾವಣೆಗೂ ಮುನ್ನ ದ್ವೀಪರಾಷ್ಷ್ರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಸರ್ವಪಕ್ಷ ಸಭೆ ನಡೆಸಿದ ಬಳಿಕ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಸಾಮಾಜಿಕ ಅವ್ಯವಸ್ಥೆ ಸರಿಪಡಿಸಲು ಇಂದಿನಿಂದ ತುರ್ತು ಪರಿಸ್ಥಿತಿ ಜಾರಿಯಾಗಲಿದೆ. ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಅಗತ್ಯ ವಸ್ತುಗಳ ಪೂರೈಕೆಯನ್ನು ರಕ್ಷಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಸಂವಿಧಾನದ ಅನುಚ್ಛೇದ 40(1)(c) ಅನುಸಾರವಾಗಿ, ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯ (ಅಧ್ಯಾಯ 40) ಸೆಕ್ಷನ್ 2 (ಅಧ್ಯಾಯ 40) ಅಡಿಯಲ್ಲಿ ತಿದ್ದುಪಡಿ ಅನ್ವಯ ವಿಕ್ರಮಸಿಂಘೆ ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ

ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ  ಈಗಾಗಲೇ ಸಿಂಗಾಪುರಕ್ಕೆ ಪಲಾಯನ ಮಾಡಿದ್ದಾರೆ. ರಾಜೀನಾಮೆ ಬಳಿಕ ತೆರವಾದ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರಿ ನಡೆಸುತ್ತಿದ್ದಾರೆ. ನಾಳೆ ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಗೆ ನಾಮನಿರ್ದೇಶನ ನಡೆಯಲಿದ್ದು, ಜುಲೈ 20 ರಂದು ಶ್ರೀಲಂಕಾದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಶ್ರೀಲಂಕಾ ಸಂಸತ್ತು ಪ್ರಕಟಿಸಿದೆ.

ಕೆಲವು ದಿನಗಳ ಹಿಂದೆ, ‘ವರ್ಲ್ಡ್ ಫುಡ್ ಪ್ರೋಗ್ರಾಮ್’ ಸಂಸ್ಥೆಯು ತೈಲ ಬೆಲೆ ಏರಿಕೆ, ಮೂಲಭೂತ ಅವಶ್ಯಕತೆಗಳ ಕೊರತೆ ಮತ್ತು ಕಡಿಮೆ ಆದಾಯದ ಪರಿಣಾಮಗಳೊಂದಿಗೆ ಸುಮಾರು 60 ಲಕ್ಷ ಶ್ರೀಲಂಕಾ ಜನರಿಗೆ ಆಹಾರ ಪೂರೈಕೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರನಿಲ್ ವಿಕ್ರಮ ಸಿಂಘೆ ರಷ್ಯಾ ವಿರುದ್ಧದ ನಿರ್ಬಂಧಗಳ ಬಗ್ಗೆ ಮಾತನಾಡಿರುವುದು ಗಮನಾರ್ಹ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!