ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇವಾ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾ ಅವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ.

2023ರ ಮೇ 20ರಂದು ಡಿಜಿ-ಐಜಿಪಿಯಾಗಿ ನೇಮಕವಾಗಿದ್ದ ಇವರು, ಇದೇ ಏಪ್ರಿಲ್‌ 30ರಂದು ನಿವೃತ್ತಿಯಾಗಬೇಕಿತ್ತು. ಆದರೆ, ಇದೀಗ 22 ದಿನಗಳ ಕಾಲ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ.

ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದು, 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸೇವಾ ಜ್ಯೇಷ್ಠತೆ ಆಧಾರದಲ್ಲಿ ಡಿಜಿ-ಐಜಿಪಿ ಹುದ್ದೆಯ ಮೊದಲ ಆಯ್ಕೆಯಾಗಿದ್ದರು. ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳ್ಳುವ ಮುನ್ನ ಇವರು ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದರು. ಆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!