October 10, 2026
Saturday, October 10, 2026
spot_img

ಮೇ 5ರ ನಂತರ ರಾಜ್ಯ ರಾಜಕಾರಣ ಉಲ್ಟಾಪಲ್ಟಾ! HDK ಸಿಡಿಸಿದ ಹೊಸ ಬಾಂಬ್‌ನ ಗುಟ್ಟೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ದಾವಣಗೆರೆ ದಕ್ಷಿಣ ಉಪಚುನಾವಣೆಯು ಆಡಳಿತಾರೂಢ ಪಕ್ಷದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.

ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೊತ್ತಿದ ಅಸಮಾಧಾನದ ಕಿಡಿ, ಈಗ ನಾಯಕರ ರಾಜೀನಾಮೆ ಹಾಗೂ ಪರಸ್ಪರ ಆರೋಪ-ಪ್ರತ್ಯಾರೋಪದ ಹಂತಕ್ಕೆ ಬಂದು ತಲುಪಿದೆ. ಈ ಆಂತರಿಕ ಕಚ್ಚಾಟವು ಚುನಾವಣಾ ಫಲಿತಾಂಶದ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮನೆಮಾಡಿದೆ.

ಇದೇ ಸಂದರ್ಭದಲ್ಲಿ ನವದೆಹಲಿಯಲ್ಲಿ ಸ್ಫೋಟಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ರಾಜ್ಯದಲ್ಲಿ ಸದ್ಯಕ್ಕೆ ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ ಎಂಬುದು ನನಗೆ ತಿಳಿದಿದೆ. ಮೇ 5ರ ಉಪಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಕರ್ನಾಟಕ ರಾಜಕಾರಣದಲ್ಲಿ ಆಗುವ ದೊಡ್ಡ ಬದಲಾವಣೆಗಳನ್ನು ನೀವೇ ನೋಡಿ,” ಎಂದು ಬಾಂಬ್ ಸಿಡಿಸಿದ್ದಾರೆ. ಈ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿದೆ.

Must Read