ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿಯಾಗಿದ್ದು, ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನ ನಮ್ಮ ಕರ್ನಾಟಕಕ್ಕೆ ಸಿಕ್ಕಿರುವುದು ನಿಮ್ಮಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು. ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ತೊಡೆದು ಹಾಕಬೇಕು ಎಂದರು.
ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರಟು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.