ರಾಜ್ಯದಲ್ಲಿ ಒಂದೇ ದಿನ 10 ಒಮಿಕ್ರಾನ್‌ ಪ್ರಕರಣಗಳು ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ನಡುವೆ ಒಮಿಕ್ರಾನ್ ಕಂಟಕ ಕೂಡ ಹೆಚ್ಚಾಗಿದೆ.
ನಿನ್ನೆ ಒಂದೇ ದಿನ ರಾಜ್ಯದಲ್ಲಿ 10 ಮಂದಿಗೆ ಒಮಿಕ್ರಾನ್ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.
8 ಒಮಿಕ್ರಾನ್ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು. ಎರಡು ಪ್ರಕರಣಗಳು ಧಾರವಾಡದಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಪತ್ತೆಯಾದ 8 ಮಂದಿಯ ಪೈಕಿ 5 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿನ ಒಮಿಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆ 76ಕ್ಕೇ ಏರಿಕೆಯಾಗಿದೆ ಎಂದಿದ್ದಾರೆ.
ನಿನ್ನೆ ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೋವಿಡ್ ಸೋಂಕಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಒಂದೇ ದಿನ 1,187 ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ಒಂದರಲ್ಲೇ 923 ಸೋಂಕಿತರು ಪತ್ತೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!