WEATHER | ಇಂದಿನಿಂದ ಎರಡು ದಿನ ರಾಜ್ಯ ತಂಪು, ಈ ಜಿಲ್ಲೆಗಳಲ್ಲಿ ಮಾತ್ರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು. ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಸ್ವಲ್ಪ ತಂಪೆನಿಸಿದರೂ ಕಾದ ಭೂಮಿಗೆ ನೀರು ಬಿದ್ದು ಧಗೆ ಎದ್ದಿದೆ.

ಮತ್ತೆ ಸೆಕೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, , ಬೀದರ್​ನಲ್ಲಿ ಒಣಹವೆ ಇರಲಿದೆ.

ಬಂಡೀಪುರ, ಕೋಲಾರ, ಎಚ್​ಡಿ ಕೋಟೆ, ಗುಬ್ಬಿ, ಕುಣಿಗಲ್, ಚಿತ್ತಾಪುರ, ನಾಗಮಂಗಲ, ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಎಂಎಂ ಹಿಲ್ಸ್​, ಭಾಗಮಂಡಲ, ಬೀದರ್​ನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಾರ್ಚ್​ 27,28 ರಂದು ರಾಜ್ಯಾದ್ಯಂತ ಒಣಹವೆ ಇರಲಿದ್ದು, 29ರಿಂದ ಮತ್ತೆ ಮಳೆ ಶುರುವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!