‌2ದಿನಗಳ ಕಾಲ ರಾಜ್ಯ ಪ್ರವಾಸ: ಬೆಂಗಳೂರಿಗೆ ಬಂದಿಳಿದ ಅಮಿತ್‌ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಷಾ ತಮ್ಮ ಎರಡು ದಿನಗಳ ಕರ್ನಾಟಕ ಪ್ರವಾಸದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಈ ಸಂದರ್ಭ ಕೇಂದ್ರ ಗೃಹ ಸಚಿವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿ ಅವರನ್ನು ಆತ್ಮೀಯವಾಗಿ ಆತ್ಮೀಯವಾಗಿ ಬರಮಾಡಿಕೊಂಡರು.

ಶುಕ್ರವಾರ ಚುನಾವಣಾ ಪ್ರಚಾರವೂ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಮ್ಮಘಟ್ಟದಲ್ಲಿ ಶೇಖರ್‌ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದು, ಸಹಕಾರ ಸಚಿವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಉದ್ಘಾಟಿಸಲಿದ್ದಾರೆ. ಜೊತೆಗೆ ವಿಧಾನಸೌಧದ ಮುಂಭಾಗದಲ್ಲಿ ಮೂರು ಪ್ರತಿಮೆಗಳನ್ನು ಸಹ ಅನಾವರಣಗೊಳಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!