ಮುಂದಿನ ವಾರದಿಂದ ರಾಜ್ಯ ಪ್ರವಾಸ: ಬಿಎಸ್ ಯಡಿಯೂರಪ್ಪ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಖಂಡರ ಜೊತೆ ಸೇರಿ ಮುಂದಿನ ವಾರ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ವಾರ ಮುಖಂಡರ ಜೊತೆಗೆ ಸೇರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. 2 ಜಿಲ್ಲೆಯಂತೆ ಪ್ರಮುಖ ಕಾರ್ಯಕರ್ತರ ಜೊತೆಗೆ ಪ್ರವಾಸ ಮಾಡುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಮಾಡಲು ನಾನು ನಿರ್ಧರಿಸಿದ್ದೇನೆ. ಮುಂದಿನ ವಾರ ದಿನಾಂಕ ನಿಶ್ಚಯ ಮಾಡಿ ಪ್ರವಾಸ ಮಾಡುತ್ತೇನೆ. ಒಂದು ದಿನಕ್ಕೆ ಎರಡು ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!