Thursday, September 11, 2025

ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಾಂತ ಹೋರಾಟ‌: ಸಂಸದ ಗೋವಿಂದ ಕಾರಜೋಳ

 ಹೊಸದಿಗಂತ ವರದಿ,ಹುಬ್ಬಳ್ಳಿ:

ಸುಪ್ರೀಂ‌ ಕೋಟ್೯ ಆದೇಶದಂತೆ ಪರಿಶಿಷ್ಟ ಜಾತಿ ಅವರಿಗೆ ಆ. ೧ ರೊಳಗೆ ಒಳಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಾಂತ ಹೋರಾಟ‌ ಮಾಡಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರದಕ್ಕೆ ಗಡವು ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತರಿಗೆ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಮೀಸಲಾತಿ ನೀಡಲು ಆಗ್ರಹಿಸಲಾಗುತ್ತಿದೆ. ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋಟ್೯ ಆದೇಶ ನೀಡಿ ಒಂದು ವರ್ಷ ವಾಗಿದೆ. ಈಗಾಗಲೇ ಕೇರಳಾ, ತಮಿಳುನಾಡಿನಲ್ಲಿ ಮೀಸಲಾತಿ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಇನ್ನೂ ಜಾರಿಗೆ ಯಾಗಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ಜಾರಿಗೆ ಯಾಗಿಲ್ಲ ಎಂದು ಹರಿಹಾಯ್ದರು.

ರಾಜ್ಯ ಸರ್ಕಾರಕ್ಕೆ ಆ. ೧ ರ ವರೆಗೆ ಗಡುವು ನೀಡಲಾಗುತ್ತಿದ್ದು, ನಾಗಮೋಹನ ದಾಸ ವರದಿ ಅನುಷ್ಠಾನ ಮಾಡಬೇಕು. ಇಲ್ಲವಾದರೆ ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಅದಕ್ಕೂ ಜಗ್ಗದಿದ್ದರೆ ಆ. ೧೧ ರಂದು ಅಧಿವೇಶನ ಆರಂಭವಾಗಲಿದ್ದು, ಅಲ್ಲಿವರೆಗೆ ಕಾಯ್ದು ಆ. ೧೬ ರಂದು ರಾಜ್ಯ ಸರ್ಕಾರದ ವಿರುದ್ಧ ಅಸಹಕಾರ ಚಳುವಳಿಯ ಮಾಡಲಾಗುವುದು. ಎಲ್ಲರೂ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಯಾವ ರಾಜ್ಯ ಸಚಿವರು ಅಲೆದಾಡದಂತೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ