ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬ್ರಾಹ್ಮಣರು ಭಯೋತ್ಪಾದಕರು ಎಂದು ಹೇಳಿದ್ದ ವಿಡಿಯೋವನ್ನ ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಹೀಗಾಗಿ ಈ ಹೇಳಿಕೆಗೆ ಬ್ರಾಹ್ಮಣ ಸಮುದಾಯ ಖಂಡನೆ ವ್ಯಕ್ತಪಡಿಸಿದ್ದು, ವಿಪ್ರ ಯುವ ವೇದಿಕೆಯಿಂದ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು, ಐಪಿಸಿ 153(B) 295(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.