Thursday, June 30, 2022

Latest Posts

ಬ್ರಾಹ್ಮಣರ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್​ ಗೆ ನೊಟೀಸ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿದ್ದ ನಟ ಚೇತನ್​ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ಬಸವನಗುಡಿ ಪೊಲೀಸರು ನೊಟೀಸ್ ನೀಡಿದ್ದಾರೆ.
ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ. ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು. ಈ ಟ್ವೀಟ್​ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಚೇತನ್​ ನೀಡಿದ ಹೇಳಿಕೆಗೆ ಸಂಬಂಧಿಸಿ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಚೇತನ್​ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈಗ ನಟ ಚೇತನ್ ಗೆ ಬಸವನಗುಡಿ ಪೊಲೀಸರಿಂದ ನೊಟೀಸ್ ಬಂದಿದೆ. ಅವರು ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss