ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಬಿ.ಕೆ. ಹರಿಪ್ರಸಾದ್ ಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.
10 ದಿನಗಳ ಒಳಗೆ ಉತ್ತರ ನೀಡುವಂತೆ ಎಐಸಿಸಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಹ್ಯೂಬ್ಲೋ ವಾಚ್ ಕಟ್ಟಿಕೊಂಡು ಪಂಚೆ ಹುಟ್ಟುಕೊಂಡು ಒಳಗೆ ಖಾಕಿ ಚಡ್ಡಿ ಧರಿಸುವುದು ಸಮಾಜವಾದವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಹೇಳದೆಯೇ ಬಿ.ಕೆ. ಹರಿಪ್ರಸಾದ್ ಇತ್ತೀಚೆಗೆ ಟೀಕಾಪ್ರಹಾರ ನಡೆಸಿದ್ದರು.