ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ರವಿಕುಮಾರ್

ಹೊಸ ದಿಗಂತ ವರದಿ, ಕಲಬುರಗಿ:

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾನು ದಿನಾಂಕ ಇತೀಚೆಗೆ ಮೇ.೨೪ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹಾಗೂ ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್ ರವಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಲಬುರಗಿ ಜಿಲ್ಲಾಧಿಕಾರಿ ಅವರು ಅತ್ಯಂತ ಗೌರವಪಾತ್ರರು.ಅವರ ವೃತ್ತಿಪರ ಸಾಮರ್ಥ್ಯ ಮತ್ತು ಪ್ರಾಮಾಣಿಕತೆಯ ಬಗ್ಗೆ ನನಗೆ ಯಾವುದೇ ಅಪವಾದವಿಲ್ಲ. ಅಂದು ನೀಡಿದ ಹೇಳಿಕೆಯು ಉದ್ದೇಶಪೂರ್ವಕವಾಗಿಯು ನೀಡಿಲ್ಲ.ಬಾಯಿ ತಪ್ಪಿನಿಂದ ಆ ಹೇಳಿಕೆ ಬಂದಿದ್ದು,ಈ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳ ಸೇವಾ ಮನೋಭಾವನೆ, ಸರ್ಕಾರಿ ಸೇವೆಯ ಬಗ್ಗೆ ನಾನು ಗೌರವ ನೀಡುತ್ತೇನೆ‌ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!