ಹೊಸದಿಗಂತ ವರದಿ, ಕಲಬುರಗಿ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಗೃಹ ಸಚಿವ,ಶಾಸಕ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಲಬುರಗಿ ನಗರದ ಅಶೋಕ್ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಮಹಾ ನಗರ ಪಾಲಿಕೆಯ ಮಾಜಿ ಸದಸ್ಯ ರಾಜು ಜಾನೆ ಎಂಬುವವರು ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲಿಸಿದ್ದು,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಕುರಿತು ಆಕ್ಷೇಪಾಹ೯ ಹೇಳಿಕೆಯನ್ನು ಹಿಂದಿನ ಬಿಜೆಪಿ ಸಕಾ೯ರದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿದ್ದರು.
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತೀಥ೯ಹಳ್ಳಿಯಲ್ಲ ನಡೆದ ಪ್ರತಿಭಟನಗಯೊಂದರಲ್ಲ ಖಗೆ೯ ವಿರುದ್ಧ ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿದ್ದು,ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜು ಜಾನೆ ಆಗ್ರಹ ಮಾಡಿದ್ದಾರೆ.
ಐಪಿಸಿ ಕಲಂ 504 ಅಡಿಯಲ್ಲಿ ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲಾಗಿದೆ.