ಹೊಸದಿಗಂತ ವರದಿ,ವಿಜಯಪುರ
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಶಾಸಕ ಎಂ.ಬಿ. ಪಾಟೀಲ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ದಲಿತ ಸಂಘಟನೆಗಳು ಇಲ್ಲಿನ ಸೊಲ್ಲಾಪುರ ರಸ್ತೆಯಲ್ಲಿರುವ ಎಂ.ಬಿ. ಪಾಟೀಲ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ, ಪ್ರತಿಭಟಿಸಿದರು.
ಸಚಿವ ಗೋವಿಂದ ಕಾರಜೋಳ ವಿರುದ್ಧ ಎಂ.ಬಿ. ಪಾಟೀಲ ಕೀಳು ಮಟ್ಟದ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಪ್ರತಿಭಟನಾಕಾರರು ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರು, ಎಂ.ಬಿ. ಪಾಟೀಲ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.
ಎಂಬಿಪಿ ಮನೆಯ ಎದುರು ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.