ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಪ್ರಧಾನಿ ಮೋದಿ ವಿಷ ಸರ್ಪ, ನೆಕ್ಕಿದ್ರೆ ಸತ್ತು ಹೋಗ್ತಾರೆ’ ಎಂದು ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge), ಸದ್ಯ ಯೂಟರ್ನ್ ಹೊಡೆದಿದ್ದಾರೆ .

ನಾನು ಮೋದಿಗೆ ವಿಷದ ಹಾವು ಅಂತ ಹೇಳಿಲ್ಲ, ಬಿಜೆಪಿಗೆ ಹೇಳಿದ್ದಾಗಿ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಗದಗ ಜಿಲ್ಲೆಯ ರೋಣದಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಖರ್ಗೆ, ನಾನು ಪ್ರಧಾನಿ ಮೋದಿಯನ್ನು ವಿಷದ ಹಾವು ಎಂದು ಹೇಳಿಲ್ಲ. ಭಾರತೀಯ ಜನತಾ ಪಾರ್ಟಿ ಹಾವು ಇದ್ದಂತೆ, ಅದನ್ನು ನೆಕ್ಕಿ ನೋಡುತ್ತೇನೆ ಅಂದರೆ ಸತ್ತು ಹೋಗ್ತಾರೆ ಅಂತಾ ಹೇಳಿದ್ದೆ. ವೈಯಕ್ತಿಕವಾಗಿ ಯಾರಿಗೂ ಹೇಳಿಲ್ಲ, ಯಾರ ಹೆಸರು ಹೇಳಿಲ್ಲ ಎಂದು ಹೇಳಿದ್ದಾರೆ.

ಖರ್ಗೆ ವಿವಾದಾತ್ಮಕ ಹೇಳಿಕೆ ಏನು?
ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ್ ಪರ ಮತಯಾಚನೆ ಮಾಡಿದ ವೇಳೆ ನರೇಗಲ್ ಪಟ್ಟಣದಲ್ಲಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷಯ ಸರ್ಪಕ್ಕೆ ಹೋಲಿಸಿದರು. ಅಲ್ಲದೇ ಅದು ನೆಕ್ಕೀತು, ವಿಷ ಇರುತ್ತೆ ಸತ್ತು ಹೋಗ್ತೀರಿ ಹುಷಾರು ಅಂದ್ರು. ಈ ಬೆನ್ನಲ್ಲೆ ಮಲ್ಲಿಕಾರ್ಜುನ್‌ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!